ಹುಬ್ಬಳ್ಳಿ: ಪೌರ ಸನ್ಮಾನ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಇದೇ 26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿದ್ದು, ಹುಬ್ಬಳ್ಳಿಯ ಜಿಮ್‌ಖಾನ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಷ್ಟ್ರಪತಿಗಳು ಹುಬ್ಬಳ್ಳಿ ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಮಹತ್ವದ ಕ್ಷಣವಾಗಿದೆ. ಈಗಾಗಲೇ ಕಾರ್ಯಕ್ರಮ ಪೂರ್ವ ತಯಾರಿ ಆಗಿದೆ. ಭದ್ರತೆ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದರು.
ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ರಾಷ್ಟ್ರಪತಿಗಳಿಗೆ ಪೌರಸನ್ಮಾನ ಆಗುತ್ತಿರುವುದು ನಿಜಕ್ಕೂ ವಿಶೇಷವಾಗಿದೆ. ಹುಬ್ಬಳ್ಳಿ ಧಾರವಾಡ ಜನರಿಗೆ ಇದೊಂದು ಹೊಸ ಅನುಭವವಾಗಿದೆ. ಬಹಳಷ್ಟು ವರ್ಷಗಳ ನಂತರ ರಾಷ್ಟ್ರಪತಿ ಹುಬ್ಬಳ್ಳಿ ಧಾರವಾಡ ಅವಳಿನಗರಕ್ಕೆ ಆಗಮಿಸುತ್ತಿರುವುದು ನಿಜಕ್ಕೂ ಸೌಭಾಗ್ಯ ಎಂದರು.
ಇದೇ ವೇಳೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಜಿಮ್ ಖಾನ್ ಮೈದಾನ ವಿವಾದದ ಸ್ಥಳ ಅಂತ ಯಾರು ಹೇಳಿದ್ದಾರೆ. ಕೋರ್ಟಿನಲ್ಲಿದೆ ನಿಜ ಆದರೆ ಇಲ್ಲಿ ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿವೆ. ಈ ನಿಟ್ಟಿನಲ್ಲಿ ಇಂತಹದೊಂದು ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.
Kshetra Samachara
24/09/2022 05:07 pm