ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಕಾಂಗ್ರೆಸ್ಸಿಗೆ ನೈತಿಕತೆ ಇಲ್ಲ : ಕೈ ನಾಯಕರ ವಿರುದ್ಧ ಶೆಟ್ಟರ್ ಸಿಡಿ ಮಿಡಿ

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ನಾಯಕರಿಗೆ ಬಿಜೆಪಿಯ ಬಗ್ಗೆ ಬಿಜೆಪಿಯ ನಾಯಕರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ, ಭ್ರಷ್ಟಾಚಾರದ ಹಗರಣದಲ್ಲಿ ಜೈಲಿಗೆ ಹೋಗಿದ್ದವರು ಪೇಸಿಎಂ ಬಗ್ಗೆ ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೌರವಯುತ ಪಕ್ಷವಾಗಿ ಉಳಿದಿಲ್ಲ. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪೇಸಿಎಂ ಎನ್ನುವ ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದೆ ಎಂದು ಕಾಂಗ್ರೆಸ್ ಪೇಸಿಎಂ ಅಭಿಯಾನದ ವಿರುದ್ಧ ಕಿಡಿ ಕಾರಿದರು.

ಕಾಂಗ್ರೆಸ್ ಯಾಕೆ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದೆ ಗೊತ್ತಿಲ್ಲ. ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ಸಲ್ಲಿಸಿ. ಅದನ್ನು ಬಿಟ್ಟು ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕೆಳಮಟ್ಟಕ್ಕೆ ಇಳಿದಿದೆ. ಅವರದ್ದೆ ಪಕ್ಷದ ಓರ್ವ ಮಾಜಿ ಸ್ಪೀಕರ್ ರಮೇಶಕುಮಾರ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇಂದಿರಾಗಾಂಧಿ ಅವರಿಂದ ಅವರ ಕುಟುಂಬದಿಂದ ಎರಡೂ, ಮೂರು ತಲೆಮಾರು ಆಗುವಷ್ಟು ಆಸ್ತಿ ಮಾಡಿದ್ದೇವೆ ಅವರ ಪರ ಹೋರಾಡಬೇಕು ಎಂದು ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಭಾರತ ಜೋಡೋ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಭಾರತ ಜೋಡೋ ಬಿಟ್ಟು, ಕಾಂಗ್ರೆಸ್ ಜೋಡೊ ಮಾಡಲಿ. ಕಾಂಗ್ರೆಸ್ ನಾಯಕರು ಪಕ್ಷದಲ್ಲಿ ಪಾದಯಾತ್ರೆ ಮಾಡಿ ಪಕ್ಷ ಸಂಘಟನೆ ಮಾಡಲಿ ಎಂದರು.

ಬಸವರಾಜ ಹೊರಟ್ಟಿಯವರನ್ನು ಬಿಜೆಪಿ ಕಡೆಗಣನೆ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಬಸವರಾಜ ಹೊರಟ್ಟಿಯವರಿಗೆ ಸೂಕ್ತ ಸ್ಥಾನ ಮಾನ ಸಿಗಲಿದೆ ಎಂದು ಭರವಸೆ ನೀಡಿದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/09/2022 05:57 pm

Cinque Terre

228.45 K

Cinque Terre

20

ಸಂಬಂಧಿತ ಸುದ್ದಿ