ಧಾರವಾಡ: ಧಾರವಾಡದಲ್ಲಿ ನಿರ್ಮಾಣಗೊಂಡಿರುವ ಐಐಐಟಿ ಕೇಂದ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಾರ್ಪಣೆಗೊಳಿಸಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಐಐಐಟಿ ಕೇಂದ್ರಕ್ಕೆ ಬಂದ ರಾಷ್ಟ್ರಪತಿ ಮುರ್ಮು ಅವರನ್ನು ಸುಧಾಮೂರ್ತಿ ಹಾಗೂ ರಾಜ್ಯ ನಾಯಕರು ಸ್ವಾಗತಿಸಿದರು.
ರಾಷ್ಟ್ರಪತಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಆಗಮಿಸಿದ್ದು, ರಾಷ್ಟ್ರಪತಿಗಳಿಗೆ ಐಐಐಟಿಯಲ್ಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ರಾಷ್ಟ್ರಪತಿಗಳೊಂದಿಗೆ ಸಿಎಂ ಬೊಮ್ಮಾಯಿ ಕೂಡ ಭೋಜನದಲ್ಲಿ ಪಾಲ್ಗೊಂಡಿದ್ದರು.
ಮಧ್ಯಾಹ್ನ ಊಟದ ನಂತರ ಮುಖ್ಯ ವೇದಿಕೆಗೆ ಬಂದ ರಾಷ್ಟ್ರಪತಿಗಳು ಐಐಐಟಿ ಕೇಂದ್ರವನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/09/2022 02:51 pm