ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಹೌದು. ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕೈ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಿನಲ್ಲಿ ಸುಮಾರು 1.5 ಕೋಟಿ ರೂ. ದುಂದು ವೆಚ್ಚ ಮಾಡಿದ್ದಕ್ಕೆ ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ ಎನ್ನಲಾಗಿದ್ದು, ಪೆಂಡಾಲ್ ಹಾಕಿದ ನಂತರ ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ಮೇಯರ್ ತಕ್ಷಣ ರಾಜೀನಾಮೆ ಕೊಡಿ ಎಂದು ಅಭಿಯಾನ ನಡೆಸಿದ್ದಾರೆ.
Kshetra Samachara
28/09/2022 09:39 am