ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಿಎಫ್‌ಐ ಬ್ಯಾನ್ ಮಾಡಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಮುತಾಲಿಕ್

ಧಾರವಾಡ: ನವರಾತ್ರಿಯ ಈ ಶುಭ ಸಂದರ್ಭದಲ್ಲಿ ದೇಶದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ದೇಶದ್ರೋಹಿ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡುವ ಮೂಲಕ ದೇಶವನ್ನು ರಕ್ಷಣೆ ಮಾಡುವ ಕೆಲಸ ಮಾಡಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.

ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದು ಆನಂದದಾಯಕ ಹಾಗೂ ಹರ್ಷದ ವಾತಾವರಣ ನಿರ್ಮಾಣ ಮಾಡಿದೆ. ಭಾರತದ ಸುರಕ್ಷತೆ ದೃಷ್ಟಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದಂತಾಗಿದೆ. ಪಿಎಫ್ಐನಂತಹ ದೇಶದ್ರೋಹಿ, ಸಮಾಜಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು. ತಡವಾಗಿಯಾದರೂ ಬ್ಯಾನ್ ಮಾಡಲಾಗಿದ್ದು, ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಲಾಗಿದೆ ಎಂದರು.

ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು. ಈ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ಅರಿತುಕೊಳ್ಳಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ಅರಿತುಕೊಳ್ಳಬೇಕು. ಈ ದೇಶಕ್ಕೆ ಬದ್ಧರಾಗಿರಬೇಕು. ಪಾಕಿಸ್ತಾನಕ್ಕೆ ಬದ್ಧರಾಗಿರೋದು, ಇಸ್ಲಾಂ ರಾಷ್ಟ್ರ ಮಾಡುವಂತಹ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು. ಈ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರ ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು. ಪಿಎಫ್‌ಐ ಬ್ಯಾನ್ ಮಾಡಿದ್ದಕ್ಕೆ ಕೇಂದ್ರ ಸರ್ಕಾರಕ್ಕೆ ನಾನು ಸಾವಿರ ಪ್ರಣಾಮಗಳನ್ನು ಸಲ್ಲಿಸುತ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/09/2022 11:37 am

Cinque Terre

50.62 K

Cinque Terre

9

ಸಂಬಂಧಿತ ಸುದ್ದಿ