ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಿಂಚೋರೆ, ಉಳ್ಳಾಗಡ್ಡಿಮಠ, ನಡಟ್ಟಿ ಮೇಲೆ ದೂರು ಕೊಟ್ಟ ಮೇಯರ್: ಅಂಚಟಗೇರಿ ಹೇಳಿದ್ದೇನು ಗೊತ್ತಾ?

ಧಾರವಾಡ: ಮೊನ್ನೆಯಷ್ಟೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೌರ ಸನ್ಮಾನ ಕಾರ್ಯಕ್ರಮಕ್ಕೆ ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ 1.5 ಕೋಟಿ ದುಂದು ವೆಚ್ಚ ಮಾಡಿ ಪೆಂಡಾಲ್ ಹಾಕಿದ ಮೇಲೆ ಮೇಯರ್ ಈರೇಶ ಅಂಚಟಗೇರಿ ಅವರು ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದಿದ್ದಾರೆ ಎಂದು ಕಾಂಗ್ರೆಸ್ ಇದೀಗ ಪೇ ಮೇಯರ್ ಅಭಿಯಾನ ಆರಂಭಿಸಿದೆ. ಈ ಸಂಬಂಧ ಇದೀಗ ಮೇಯರ್ ಈರೇಶ ಅಂಚಟಗೇರಿ ಅವರು ರಾಷ್ಟ್ರಪತಿ ಕಾರ್ಯಾಲಯ, ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತರು ಹಾಗೂ ಪಾಲಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಕಾರ್ಯಾಲಯದಿಂದ ಬಂದ ನಿರ್ದೇಶನದಂತೆಯೇ ನಾವು ಕಾರ್ಯಕ್ರಮ ಮಾಡಿದ್ದೇವೆ. ಕಾಂಗ್ರೆಸ್ನವರು ರಾಷ್ಟ್ರಪತಿ ಕಾರ್ಯಕ್ರಮಕ್ಕೆ ದುಂದು ವೆಚ್ಚ ಎಂಬ ಪದ ಬಳಕೆ ಮಾಡಿದ್ದಾರೆ. ಈ ಸಂಬಂಧ ರಾಷ್ಟ್ರಪತಿಗಳ ಕಾರ್ಯಾಲಯದಿಂದಲೇ ತನಿಖೆಯಾಗಬೇಕು ಎಂದು ಪತ್ರ ಬರೆದಿದ್ದೇನೆ. ಪೊಲೀಸ್ ಆಯುಕ್ತರಿಗೂ ದೂರು ಸಲ್ಲಿಸಿದ್ದೇನೆ. ರಜತ್ ಉಳ್ಳಾಗಡ್ಡಿಮಠ, ದೀಪಕ ಚಿಂಚೋರೆ, ಮಂಜುನಾಥ ನಡಟ್ಟಿ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಲಿಸಲು ಮನವಿ ಮಾಡಿದ್ದೇನೆ ಎಂದಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/09/2022 02:03 pm

Cinque Terre

154.74 K

Cinque Terre

4

ಸಂಬಂಧಿತ ಸುದ್ದಿ