ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ ಕಾರ್ಯಕ್ರಮ: ಜನ ಕಲ್ಯಾಣದ ಚರ್ಚಾಗೋಷ್ಠಿ ಕೇಂದ್ರ ಸಚಿವ ಚಾಲನೆ

ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಮೇಕ್ ಇನ್ ಇಂಡಿಯಾ ಕನಸನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಹಾಗೂ ಜನ ಕಲ್ಯಾಣ ಯೋಜನೆ ಕುರಿತು ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ ಕಾರ್ಯಕ್ರಮವನ್ನು ಹುಬ್ಬಳ್ಳಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಆಡಿಟೋರಿಯಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಜನ ಕಲ್ಯಾಣ ಯೋಜನೆ ಕುರಿತು ಚರ್ಚಾಗೋಷ್ಠಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಚಾಲನೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದ ಜನ ಕಲ್ಯಾಣ ಯೋಜನೆ ಕುರಿತು ಚರ್ಚೆ ನಡೆಸುವ ಮೂಲಕ ಮಹತ್ವದ ಕಾರ್ಯಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ.

ಇನ್ನೂ ಕಾರ್ಯಕ್ರಮದಲ್ಲಿ ಭಾರತದ ಅಭಿವೃದ್ಧಿ ಕನಸನ್ನು ಸಾಕಾರಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕುರಿತು ಕೇಂದ್ರ ಸಚಿವರು ವಿದ್ಯಾರ್ಥಿಗಳ ಜೊತೆಗೆ ಹಾಗೂ ಸಾರ್ವಜನಿಕರ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದರು.

Edited By : Manjunath H D
Kshetra Samachara

Kshetra Samachara

02/10/2022 10:07 am

Cinque Terre

52.67 K

Cinque Terre

0

ಸಂಬಂಧಿತ ಸುದ್ದಿ