ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಧಾರವಾಡದಲ್ಲಿ ಆರ್‌ಎಸ್‌ಎಸ್‌ನಿಂದ ಆಕರ್ಷಕ ಪಥಸಂಚಲನ

ಧಾರವಾಡ: ವಿಜಯದಶಮಿ ಅಂಗವಾಗಿ ಧಾರವಾಡದಲ್ಲಿ ಆರ್‌ಎಸ್ಎಸ್‌ನಿಂದ ಆಕರ್ಷಕ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.

ಧಾರವಾಡದ ಕರ್ನಾಟಕ ಹೈಸ್ಕೂಲ್ ಮೈದಾನದಿಂದ ಆರಂಭವಾದ ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ನೂರಾರು ಘಣವೇಷಧಾರಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಮನಸೆಳೆದರು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಕೂಡ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

ವಿಜಯದಶಮಿ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ನಿಂದ ಪ್ರತಿವರ್ಷ ಪಥಸಂಚಲನ ಹಮ್ಮಿಕೊಳ್ಳಲಾಗುತ್ತದೆ. ಪ್ರಸಕ್ತ ವರ್ಷವೂ ನಡೆದ ಪಥಸಂಚಲನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು

Edited By : Nagesh Gaonkar
Kshetra Samachara

Kshetra Samachara

02/10/2022 08:42 pm

Cinque Terre

30.81 K

Cinque Terre

22

ಸಂಬಂಧಿತ ಸುದ್ದಿ