ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಹಳ್ಳಿ-ಹಳ್ಳಿಗಳ ನೈರ್ಮಲ್ಯಕ್ಕೆ ಸ್ವಚ್ಛ ಸಂಕೀರ್ಣ ಘಟಕ; ಕುಸುಮಾವತಿ

ಕುಂದಗೋಳ: ಗ್ರಾಮ ಗ್ರಾಮಗಳ ನೈರ್ಮಲ್ಯ ಕಾಪಾಡಲು ಸ್ವಚ್ಛ ಸಂಕೀರ್ಣ ಘಟಕ ಅವಶ್ಯ ಇದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದ್ದಾರೆ.

ಅವರು ಕುಂದಗೋಳ ಮತಕ್ಷೇತ್ರದ ಚನ್ನಾಪೂರದಲ್ಲಿ ನಡೆದ ಸ್ವಚ್ಛ ಸಂಕೀರ್ಣ ಘಟಕ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಚನ್ನಾಪೂರ ಗ್ರಾಮದಲ್ಲಿ ಸ್ವಚ್ಛ ಭಾರತ ಘಟಕ ಸುಸಜ್ಜೀತವಾಗಿ ನಿರ್ಮಾಣವಾಗಿದೆ. ಇದರ ಸದುಪಯೋಗ ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಗಂಗಾಧರ ಕುಂದಕುರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸ್ವಚ್ಛ ಸಂಕೀರ್ಣ ಘಟಕದ ನಿರ್ವಹಣೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

04/10/2022 03:42 pm

Cinque Terre

17.83 K

Cinque Terre

3

ಸಂಬಂಧಿತ ಸುದ್ದಿ