ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜಿಲ್ಲಾ ಪಂಚಾಯ್ತಿ ಎದುರು ಸಾಮಾಜಿಕ ಕಾರ್ಯಕರ್ತ ಉಪವಾಸ ಸತ್ಯಾಗ್ರಹ

ಧಾರವಾಡ: ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯ್ತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಇದನ್ನು ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ರೊಟ್ಟಿಗವಾಡ ಅವರು ಧಾರವಾಡ ಜಿಲ್ಲಾ ಪಂಚಾಯ್ತಿ ಎದುರು ಒಂಟಿಯಾಗಿಯೇ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಯರಿಕೊಪ್ಪ ಗ್ರಾಮ ಪಂಚಾಯ್ತಿಯಲ್ಲಿ 14 ಹಾಗೂ 15ನೇ ಹಣಕಾಸು ಆಯೋಗದಲ್ಲಿ ಸುಮಾರು 30 ರಿಂದ 40 ಲಕ್ಷ ರೂಪಾಯಿ ಅವ್ಯವಹಾರವಾಗಿದೆ. ಈ ಸಂಬಂಧ ಪೂರಕ ದಾಖಲೆಪತ್ರಗಳು ನನ್ನ ಬಳಿ ಇವೆ. ಇವುಗಳನ್ನು ಸರ್ಕಾರಕ್ಕೆ ಹಾಗೂ ಜಿಲ್ಲಾ ಪಂಚಾಯ್ತಿಗೂ ನಾನು ಕಳುಹಿಸಿಕೊಟ್ಟಿದ್ದೆ. ಈ ಸಂಬಂಧ ನಿಸ್ಪಕ್ಷಪಾತವಾಗಿ ತನಿಖೆ ನಡೆಯಲಿಲ್ಲ. ಕೂಡಲೇ ಸರ್ಕಾರ ಈ ಅವ್ಯವಹಾರವನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ರೊಟ್ಟಿಗವಾಡ ಒತ್ತಾಯಿಸಿದ್ದಾರೆ.

ವಿದ್ಯುತ್ ದೀಪ, ನಲ್ಲಿಗಳ ಖರೀದಿ ಸೇರಿದಂತೆ ಇತ್ಯಾದಿ ವಸ್ತುಗಳ ಖರೀದಿಯಲ್ಲಿ ಯರಿಕೊಪ್ಪ ಗ್ರಾಮ ಪಂಚಾಯ್ತಿಯಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ಜಿಲ್ಲಾ ಪಂಚಾಯ್ತಿ ಈ ಬಗ್ಗೆ ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರೆಯಲಿದೆ ಎಂದು ರೊಟ್ಟಿಗವಾಡ ಸ್ಪಷ್ಟಪಡಿಸಿದ್ದಾರೆ.

Edited By : Shivu K
Kshetra Samachara

Kshetra Samachara

07/10/2022 02:05 pm

Cinque Terre

59.54 K

Cinque Terre

0

ಸಂಬಂಧಿತ ಸುದ್ದಿ