ಹುಬ್ಬಳ್ಳಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಜನಸಂಖ್ಯೆಗೆ ಅನುಗುಣವಾಗಿ, ಮೀಸಲಾತಿ ಹೆಚ್ಚಿಸಬೇಕೆಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಕಳೆದ 241 ದಿನಗಳಿಂದ ಅಹೋರಾತ್ರಿ ಸತ್ಯಾಗ್ರಹ ನಡೆಸುತ್ತಿದ್ದರು.
ಈ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಸಮೂದಾಯಕ್ಕೆ ಮೀಸಲಾತಿ ಹೆಚ್ವಿಸಿ ಘೋಷಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮೂದಾಯದ ವತಿಯಿಂದ ನಗರದ ಚನ್ನಮ್ಮ ಸರ್ಕಲ್ ನಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಣೆ ಮಾಡಿದರು.
ಇನ್ನೂ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿತು. ಆ ವರದಿಯ ಪ್ರಕಾರ ಪರಿಶಿಷ್ಟ ಜಾತಿಗೆ ಶೇ.15 ರಷ್ಟಿದ್ದ ಮೀಸಲಾತಿಯನ್ನು ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ ಶೇ. 7 ಕ್ಕೆ ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಒಮ್ಮತ ತಿರ್ಮಾಣಕ್ಕೆ ಬಂದಿದ್ದು ಸ್ವಾಗತಿಸಿ. ರಾಜ್ಯ ಸರ್ಕಾರ ತತ್ ಕ್ಷಣ ವಿಶೇಷ ಅಧಿವೇಶನ ಕರೆದು ಮೀಸಲಾತಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಂಜುನಾಥ ಹುಡೇದ್, ಅಶೋಕ ವಾಲ್ಮೀಕಿ, ಗುರುನಾಥ ಉಳ್ಳಿಕಾಶಿ, ಪ್ರೇಮನಾಥ್ ಚಿಕ್ಕತುಂಬಳ, ವೆಂಕಟೇಶ ಮೆಸ್ತ್ರಿ, ಗೋಪಾಲ ಕಾಮನಗೌಡ್ರ, ಗುರುನಾಥ ಯಾವಗಲ್, ಮಣಿಕಂಠ ಶಾಗೋಟಿ, ಅಶೋಕ ಸನ್ನಿ, ಬಾಸ್ಕರ್ ಮುತ್ತಗಿ ಸೇರಿದಂತೆ ಮುಂತಾದವರು ಇದ್ದರು.
Kshetra Samachara
08/10/2022 04:51 pm