ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮತ್ತೆ ಮಾಜಿ ಸಿಎಂ ಕಡೆಗಣನೆ; ಶೆಟ್ಟರ್ ಹೆಸರು ಕೈಬಿಟ್ಟ ರೈಲ್ವೆ ಇಲಾಖೆ

ಧಾರವಾಡ: ಮೇಲ್ದರ್ಜೆಗೇರಿದ ಧಾರವಾಡದ ರೈಲ್ವೆ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನು ಕಡೆಗಣನೆ ಮಾಡಲಾಗಿದೆ.

ಹೌದು! ನಾಳೆ ಮೇಲ್ದರ್ಜೆಗೇರಿದ ರೈಲ್ವೆ ನಿಲ್ದಾಣ ಲೋಕಾರ್ಪಣೆಯಾಗಲಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನೇ ಕಾರ್ಯಕ್ರಮದಿಂದ ಹೊರಗಿಡಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ರೈಲ್ವೆ ಸಚಿವರು ಸಹ ಉದ್ಘಾಟನೆಗೆ ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಜಗದೀಶ್ ಶೆಟ್ಟರ್ ಆಗಮಿಸುತ್ತಿಲ್ಲ. ಏಕೆಂದರೆ ಆಮಂತ್ರಣ ಪತ್ರಿಕೆಯಲ್ಲಿ ಅವರ ಹೆಸರನ್ನೇ ಕೈಬಿಡಲಾಗಿದ್ದು, ಇದು ರಾಜಕೀಯ ತಿರುವು ಪಡೆದುಕೊಂಡಿದೆ.

ತ್ರಿಬಲ್ ಐಟಿ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲೂ ಶೆಟ್ಟರ್ ಹೆಸರನ್ನು ಕೈಬಿಡಲಾಗಿತ್ತು. ಅದಾದ ಮೇಲೆ ಇದೀಗ ರೈಲ್ವೆ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲೂ ಅವರ ಹೆಸರನ್ನು ಕೈಬಿಟ್ಟಿದ್ದು ಬೇಕಂತಲೇ ಶೆಟ್ಟರ್ ಅವರನ್ನು ಸೈಡ್ ಲೈನ್ ಮಾಡುತ್ತಿದ್ದಾರಾ ಅನ್ನೋ ಅನುಮಾನ ಹುಟ್ಟುಹಾಕಿದೆ.

Edited By : Vijay Kumar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

10/10/2022 02:06 pm

Cinque Terre

37.51 K

Cinque Terre

30

ಸಂಬಂಧಿತ ಸುದ್ದಿ