ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುನಿಸಿಕೊಂಡ್ರಾ ಮಾಜಿ ಸಿಎಂ ಶೆಟ್ಟರ್

ಧಾರವಾಡ: ಮೇಲ್ದರ್ಜೆಗೇರಿದ ಧಾರವಾಡ ರೈಲ್ವೆ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಹೆಸರನ್ನೇ ಕೈಬಿಡಲಾಗಿತ್ತು. ಆದರೂ ಆ ಕಾರ್ಯಕ್ರಮಕ್ಕೆ ಜಗದೀಶ ಶೆಟ್ಟರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಅವರಿಗಾಗಿ ವೇದಿಕೆಯಲ್ಲಿ ಖುರ್ಚಿಯನ್ನೂ ಮೀಸಲಿಡಲಾಗಿತ್ತು. ಆದರೆ, ಜಗದೀಶ ಶೆಟ್ಟರ್ ಅವರು ಕಾರ್ಯಕ್ರಮಕ್ಕೆ ಬರದೇ ದೂರ ಉಳಿದಿದ್ದಾರೆ. ಇದನ್ನು ನೋಡಿದರೆ, ಜಗದೀಶ ಶೆಟ್ಟರ್ ಧಾರವಾಡ ಜಿಲ್ಲೆಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡ್ರಾ ಎಂಬ ಪ್ರಶ್ನೆ ಮೂಡಿದೆ.

ಮೊನ್ನೆ ರಾಷ್ಟ್ರಪತಿ ಕಾರ್ಯಕ್ರಮದಲ್ಲೂ ಜಗದೀಶ ಶೆಟ್ಟರ್ ಅವರಿಗೆ ವೇದಿಕೆ ಮೇಲೆ ಅವಕಾಶ ಕಲ್ಪಿಸಿಕೊಟ್ಟಿರಲಿಲ್ಲ. ಧಾರವಾಡದ ರೈಲು ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲೂ ಜಗದೀಶ ಶೆಟ್ಟರ್ ಅವರ ಹೆಸರನ್ನು ಕೈಬಿಡಲಾಗಿತ್ತು. ಇದನ್ನೆಲ್ಲ ನೋಡಿದರೆ ಜಗದೀಶ ಶೆಟ್ಟರ್ ಅವರನ್ನು ಸೈಡ್ಲೈನ್ ಮಾಡಲಾಗುತ್ತಿದೆಯಾ ಎಂಬ ಚರ್ಚೆಗೆ ಅವಕಾಶ ಮಾಡಿಕೊಟ್ಟಂತಾಗಿದೆ.

Edited By : Somashekar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/10/2022 02:30 pm

Cinque Terre

111.25 K

Cinque Terre

19

ಸಂಬಂಧಿತ ಸುದ್ದಿ