ಹುಬ್ಬಳ್ಳಿ: ಸಿದ್ಧರಾಮಯ್ಯನವರು ಮೋದಿ ಹಾಗೂ ಬಿಎಸ್‌ಬೈ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಐದು ವರ್ಷ ಮುಖ್ಯ ಸಿಎಂ ಆಗಿ ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವವರು ಅವರಿಗೆ ಹೇಗಿರಬೇಕು ಎಂದು ಹೇಳುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಜವಾಬ್ದಾರಿ ಸ್ಥಾನ ನಿಭಾಯಿಸಿದ ಸಿದ್ದರಾಮಯ್ಯ ಈ ರೀತಿ ಮಾತನಾಡುವುದು ಸರಿಯಲ್ಲ. ಪ್ರಧಾನಿ ಮೋದಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಹಗುರುವಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಶೋಭೆ ತರುವಂತದಲ್ಲ, ಅವರಿಗೆ ಅಪಮಾನ ಮಾಡುವುದು ದೇಶದ ಜನರಿಗೆ ಅಪಮಾನ ಮಾಡಿದ ಹಾಗೆ ಎಂದು ಹೇಳಿದರು.
ಇನ್ನು ಕೆಲವು ಕಡೆ ಆರ್.ಎಸ್.ಎಸ್ ಕಾರ್ಯಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಇದರಿಂದ ಸಮಾಜದಲ್ಲಿ ಗಲಭೆ ಉಂಟಾಗುತ್ತದೆ. ರಾಜ್ಯ ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸೂಕ್ತವಾಗಿ ನಿಭಾಯಿಸುತ್ತದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/10/2022 05:28 pm