ಸ್ವಾತಂತ್ರ್ಯ ನಡಿಗೆ ಬೃಹತ್ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮಕ್ಕೆ, ಧಾರವಾಡ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನೀಲಕುಮಾರ ಪಾಟೀಲ ಅವರು, ಮಾರ್ಗ ತೋರಿಸಲು ಹಾಕಿದ್ದ ಬ್ಯಾನರ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ , ಡಾ . ಬಿ.ಆರ್ . ಅಂಬೇಡ್ಕರ್ ಫೋಟೋ ಬಳಸಿಕೊಂಡು ಅವಮಾನ ಮಾಡಿದ್ದಾರೆ ಹಾಗಾಗಿ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ದಲಿತ ವಿಮೋಚನಾ ಸಮಿತಿ ನಗರದ ಅಂಬೇಡ್ಕರ್ ಪುತ್ಥಳಿ ಮುಂದೆ ನಿಂತು ಪ್ರತಿಭಟನೆ ಮಾಡಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ.
ಅನೀಲಕುಮಾರ ಪಾಟೀಲ ಅವರು ಮಹಿಳಾ ವಿದ್ಯಾಪೀಠದಿಂದ ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದವರೆಗೆ ಮಾರ್ಗ ತೋರಿಸುವ ಬ್ಯಾನರ್ ನಲ್ಲಿ ಅವಮಾನ ಮಾಡಿದ್ದಾರೆ. ಅವರು ಕೂಡಲೇ ಡಾ . ಬಿ.ಆರ್ . ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಅವರ ಗಡಿಪಾರಿಗೆ ಆಗ್ರಹಿಸಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
Kshetra Samachara
29/08/2022 03:31 pm