ಧಾರವಾಡ ನಗರದಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಧಾರವಾಡ ಗಾಂಧಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಜನರು ಮಲಗದೇ ನೀರು ಹೊರ ಚೆಲ್ಲಲು ಪರದಾಡುವ ಸ್ಥಿತಿ ನಿರದಮಾಣವಾಗಿತ್ತು.
ತಡರಾತ್ರಿವರೆಗೆ ಜನರು ನೀರು ಹೊರ ಹಾಕುವ ಕೆಲಸ ಮಾಡಿದ್ದಾರೆ. ಈ ಹಿಂದೆ ಕೂಡ ಮಳೆಯಿಂದ ಗಾಂಧಿನಗರದಲ್ಲಿ ಇದೇ ರೀತಿ ಸಮಸ್ಯೆಯಾಗಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಿಕೊಡಬೇಕು ಎಂದು ಪಾಲಿಕೆಗೆ ಮನವಿ ಮಾಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಅಲ್ಲದೇ ಧಾರವಾಡದ ಜನ್ನತನಗರ, ಲಕ್ಷ್ಮೀಸಿಂಗನಕೆರೆ ಬಡಾವಣೆಯಲ್ಲೂ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/08/2022 06:21 pm