ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮನೆಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಭೇಟಿ ನೀಡಿ ಸಚಿವರ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದರು.
ಕೇಂದ್ರ ಸಚಿವರ ಸ್ವಗೃಹಕ್ಕೆ ಆಗಮಿಸಿದ ಸಾಲುಮರದ ತಿಮ್ಮಕ್ಕನವರಿಗೆ ಸಚಿವರು ಅದ್ದೂರಿಯಾಗಿ ಸ್ವಾಗತಿಸಿದ್ದು ಮಾತ್ರವಲ್ಲದೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಮನವಿ ನೀಡಿದ ಸಾಲುಮರದ ತಿಮ್ಮಕ್ಕನವರು, ಪ್ರತಿನಿತ್ಯ ಅಯ್ಯಪ್ಪನ ದರ್ಶನಕ್ಕೆ ವಿಶೇಷ ರೈಲು ಸೇವೆ ಕಲ್ಪಿಸುವ ಕುರಿತು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಸೂಕ್ತ ಸಮಾಲೋಚನೆ ನಡೆಸಿ ಬೇಡಿಕೆ ಈಡೇಸುವ ಭರವಸೆ ನೀಡಿದರು.
Kshetra Samachara
30/08/2022 01:44 pm