ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ರಾಜ್ಯದ ಗಮನಸೆಳೆದಿದೆ. ಅಲ್ಲದೇ ಬಿಜೆಪಿ ಶ್ರೀಗಳ ರಕ್ಷಣೆಗೆ ನಿಂತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.
ಧಾರವಾಡದಲ್ಲೂ ಮುರುಘಾ ಶ್ರೀಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಕರ್ನಾಟಕ ಮಾದಿಗ ಸಮಾಜದ ಮುಖಂಡರು ಮುರುಘಾ ಶ್ರೀಗಳ ವಿರುದ್ಧ ಮಳೆಯಲ್ಲೇ ಪ್ರತಿಭಟನೆ ನಡೆಸಿದರು.ಅಪ್ರಾಪ್ತ ಬಾಲಕಿಯರ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಆದರೆ, ಬಿಜೆಪಿ ಇವರ ರಕ್ಷಣೆಗೆ ನಿಂತಿದೆ. ಸ್ವಾಮೀಜಿಗೆ ತಕ್ಕ ಶಿಕ್ಷೆ ಆಗಬೇಕು. ಅವರೊಬ್ಬ ಜಾತಿವಾದಿ ಸ್ವಾಮೀಜಿ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸ್ವಾಮೀಜಿ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಬಿಜೆಪಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/09/2022 04:16 pm