ಸಮಾಜದಲ್ಲಿ ದಲಿತರ ಮೇಲೆ ದೌರ್ಜನ್ಯ, ಅನ್ಯಾಯವಾಗುತ್ತಿದ್ದು, ಈ ಕೃತ್ಯವನ್ನು ವಿರೋಧಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಮುಂದೆ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಜಯನಗರ ಜಿಲ್ಲೆ ಹೂವಿನಹಡಗಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಹಾಯಕ ಪ್ರಾಧ್ಯಾಪಕರಿಗೆ ಜಾತಿ ವಿಷಯಕ್ಕೆ ಪದೇ ಪದೆ ನೋಟಿಸ್ ನೀಡಿ ಕಿರುಕುಳ ಕೊಡಲಾಗುತ್ತಿದೆ. ಗದಗ ಜಿಲ್ಲೆ ರೋಣ ತಾಲೂಕು ಮೆಣಸಗಿ ಗ್ರಾಮದ ನಿಲ್ದಾಣದಲ್ಲಿ ನಿಂತಿದ್ದ ದಲಿತ ಯುವಕರಿಗೆ ಸೆಗಣಿ ತಿನ್ನಿಸಲು ಯತ್ನಿಸಿ ದೌರ್ಜನ್ಯ ಎಸಗಲಾಗಿದೆ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಬಂಗಾರಿ ಕ್ಯಾಂಪ್ ನಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸೆಗಣಿ ಎರಚಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದರು.
ಈ ಕುರಿತು ಸರ್ಕಾರ, ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಿ ಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಸಂಘಟಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
Kshetra Samachara
27/06/2022 04:05 pm