ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಮೂರನೇ ದಿನಕ್ಕೆ ಕಾಲಿಟ್ಟ ರೈತರ ಸರತಿ ಆಮರಣಾಂತ ಸತ್ಯಾಗ್ರಹ; ಸರ್ಕಾರದ ವಿರುದ್ಧ ಆಕ್ರೋಶ

ನವಲಗುಂದ ಪಟ್ಟಣದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಕಳಸಾ ಬಂಡೂರಿ ಹೋರಾಟ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ರೈತರ ಸರತಿ ಆಮರಣಾಂತ ಸತ್ಯಾಗ್ರಹ ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

ಸರ್ಕಾರದ ಎದುರು ಅನೇಕ ಬೇಡಿಕೆಗಳನ್ನಿಟ್ಟ ರೈತರು ಅದರಲ್ಲಿ ಪ್ರಮುಖ ಬೇಡಿಕೆಯಾದ ಮಹದಾಯಿ ಕಳಸಾ ಬಂಡೂರಿ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು ಎಂಬುದು ಒಂದು. ಹಲವು ನದಿಗಳ ಜೋಡಣೆ ಮಾಡುವ ಬಗ್ಗೆ ದೆಹಲಿಯಲ್ಲಿ ಸಭೆ ನಡೆದಿದ್ದು, ಮಹದಾಯಿ ಬಗ್ಗೆ ಪ್ರಸ್ತಾಪವಾಗಿಲ್ಲ. ಮಹದಾಯಿಗೇಕೆ ತಾರತಮ್ಯ ಮಾಡಲಾಗುತ್ತಿದೆ. ಮುಂದಿನ ನಾಲ್ಕು ದಿನಗಳಲ್ಲಿ ಬೇಡಿಕೆ ಈಡೇರಿಸದೇ ಇದ್ದಲ್ಲಿ ಆಮರಣಾಂತ ಉಪವಾಸವನ್ನು ಕೈಗೊಳ್ಳಲಾಗುವುದು ಎಂದು ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದ ಅಧ್ಯಕ್ಷ ಹಾಗೂ ಮಹದಾಯಿ ಹೋರಾಟಗಾರರಾದ ಲೋಕನಾಥ ಹೆಬಸೂರ ತಿಳಿಸಿದ್ದಾರೆ.

Edited By :
Kshetra Samachara

Kshetra Samachara

23/07/2022 04:32 pm

Cinque Terre

18.2 K

Cinque Terre

0

ಸಂಬಂಧಿತ ಸುದ್ದಿ