ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಗದ್ದೆಯೊಂದರಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಧಾರವಾಡ ಅರಣ್ಯ ಇಲಾಖೆ ಸಿಬ್ಬಂದಿ ಗದಗ ಮೃಗಾಲಯದಿಂದ ಬೋನು ತರಿಸಿಕೊಂಡಿದ್ದಾರೆ.
ಬುಧವಾರ ರಾತ್ರಿಯೂ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ನಡೆದಿದ್ದು, ಕಬ್ಬಿನ ಗದ್ದೆಯಲ್ಲಿ ಚಿರತೆ ಅಡಗಿ ಕುಳಿತಿದೆ. ಸ್ವತಃ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಅವರೇ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡುವ ತಯಾರಿ ಮಾಡಿಕೊಂಡಿದ್ದಾರೆ.
Kshetra Samachara
22/09/2021 10:00 pm