ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನದ ಪ್ರಯುಕ್ತವಾಗಿ ಆಯೋಜಿಸಲಾಗಿದ್ದ ಸಸಿ ವಿತರಣೆ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ನೂತನ ಸದಸ್ಯರಾದ ರೂಪಾ ದಯಾನಂದ ಶೆಟ್ಟಿ ಹಾಗೂ ಸಮೃದ್ಧಿ ದಾಸರ ಚಾಲನೆ ನೀಡಿದರು.
ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ಹಾಗೂ ಯುವ ಪೀಳಿಗೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ ಸುಮಾರು ನೂರಕ್ಕೂ ಹೆಚ್ಚು ಸಸಿಗಳನ್ನು ವಿತರಣೆ ಮಾಡಲಾಯಿತು.
ಇನ್ನೂ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ ಚರಿತ್ರೆ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಯಿತು.
ಕಾರ್ಯಕ್ರಮದಲ್ಲಿ ರಾಜು ಮಾನೆ, ಅಭಿಷೇಕ್ ದಾಸರ, ಅಶ್ವಿನಿ , ಗಿರಿಜಾ, ಸಂಗೀತಾ, ಭೀಮಪ್ಪ ಅದ್ಯಾನವರ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Kshetra Samachara
31/10/2021 12:39 pm