ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಮ್ಮಾಪೂರ ಬಣಗಾರ ಓಣಿಯಲ್ಲಿರುವ ವೀರಭದ್ರೇಶ್ವರ ಹಾಗೂ ಬಸವಣ್ಣ ದೇವರ ನೂತನ ಮೂರ್ತಿ ಪ್ರತಿಷ್ಠಾಪನೆ ಮತ್ತು ಜನಜಾಗೃತಿ ಸಮಾವೇಶವನ್ನು ಇದೇ 12ರಿಂದ 16ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಂಚಕಮೀಟಿಯ ಮುಖ್ಯಸ್ಥರಾದ ಪ್ರಕಾಶ ಬೆಂಡಿಗೇರಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಳೆಯ ದೇವಸ್ಥಾನವನ್ನು ನವೀಕರಣಗೊಳಿಸಿ ಈಗ ಹೊಸ ದೇವಸ್ಥಾನದಲ್ಲಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ 12ರಿಂದ 15ರ ವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಇನ್ನೂ ಕಾರ್ಯಕ್ರಮಕ್ಕೆ ದಿಂಗಾಲೇಶ್ವರ ಸ್ವಾಮೀಜಿ, ಗುರುಸಿದ್ಧೇಶ್ವರ ಸ್ವಾಮೀಜಿ, ಅಭಿನವ ಶಿವಸಿದ್ಧರಾಮೇಶ್ವರ, ಕೊಟ್ಟೂರು ಬಸವೇಶ್ವರ ಸ್ವಾಮೀಜಿ ಹಾಗೂ ರಂಭಾಪುರಿ ಸ್ವಾಮೀಜಿಗಳು ಆಗಮಿಸುತ್ತಿದ್ದಾರೆ. ಅಲ್ಲದೇ ಜಗದೀಶ್ ಶೆಟ್ಟರ್, ಪ್ರಸಾದ ಅಬ್ಬಯ್ಯ, ನಾಗರಾಜ ಛಬ್ಬಿ, ಬಸವರಾಜ ಹೊರಟ್ಟಿ, ಶಂಕರಪಾಟೀಲ ಮುನೇನಕೊಪ್ಪ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಅವರು ಹೇಳಿದರು.
Kshetra Samachara
10/11/2021 01:19 pm