ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ತಡೆದ ರೈತ ಮುಖಂಡರು- ಸ್ವಾಮಿನಾಥನ್ ವರದಿ ಜಾರಿಗೆ ಪಟ್ಟು ಹಿಡಿದ ಅನ್ನದಾತ

ಹುಬ್ಬಳ್ಳಿ: ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳಸಾ ಬಂಡೂರಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ ರೈತ ಮುಖಂಡರು ಹುಬ್ಬಳ್ಳಿಯ ಗಬ್ಬೂರು ಟೋಲ್ ಬಳಿ ಹೆದ್ದಾರಿ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮಾಡಬೇಕು ಹಾಗೂ ಅನ್ನದಾತನ ವಿವಿಧ ಬೇಡಿಕೆಗಳನ್ನು ಈಡೇರಿಸುವ ಮೂಲಕ ರೈತ ಸಮುದಾಯದ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಕಳಸಾಬಂಡೂರಿ ಹೋರಾಟಗಾರ ಸಿದ್ದು ತೇಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Edited By : PublicNext Desk
Kshetra Samachara

Kshetra Samachara

26/11/2021 12:36 pm

Cinque Terre

6.65 K

Cinque Terre

0

ಸಂಬಂಧಿತ ಸುದ್ದಿ