ಹುಬ್ಬಳ್ಳಿ: ಗದಗ ಲವ್ ಜಿಹಾದ್ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಪೂರ್ವ ಪುರಾಣಿಕ್ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.
ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ರಸ್ತೆ ತಡೆ ಮಾಡಿ ನಂತರ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆ ನಡೆಸಲಾಯಿತು. ಅಪೂರ್ವ ಮೇಲಿನ ಹಲ್ಲೆಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮಾರಣಾಂತಿಕ ಹಲ್ಲೆ ನಡೆಸಿದವನನ್ನು ಗಲ್ಲಿಗೇರಿಸಲು ಆಗ್ರಹಿಸಲಾಯಿತು. ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟುವಂತೆ ಒತ್ತಾಯಿಸಲಾಯಿತು.
Kshetra Samachara
24/03/2022 03:29 pm