ಹುಬ್ಬಳ್ಳಿ: ಹುಬ್ಬಳ್ಳಿಯ ಸಿದ್ಧಾರ್ಥ ಕಾಲೋನಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮಾರಕಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಹುಬ್ಬಳ್ಳಿಯ ಅಂಬೇಡ್ಕರ್ ಸರ್ಕಲ್ ನಿಂದ ಆರಂಭಗೊಂಡ ಪ್ರತಿಭಟನೆಯ ರ್ಯಾಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯವರೆಗೆ ನಡೆಸಲಾಯಿತು. ಬಳಿಕ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಕೂಡಲೇ ಸ್ಮಾರಕ ಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.
ಇನ್ನೂ ಹುಬ್ಬಳ್ಳಿ ಶಹರದ ವಾರ್ಡ್ ನಂಬರ 60ರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿ ನಂ.01ರಲ್ಲಿ ಬರುವ ಸಿದ್ಧಾರ್ಥ ಕಾಲೋನಿಯಲ್ಲಿ ನಿವೇಶನ ಸಂಖ್ಯೆ 122, 123 ಈಗಾಗಲೇ ಸ್ಥಾಪಿತವಾದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸ್ಥಳದಲ್ಲಿ ಸ್ಮಾರಕ ಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.
Kshetra Samachara
02/06/2022 02:50 pm