ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವೇದಿಕೆಗೆ ಬಂದ ದೇಶದ ಪ್ರಥಮ ಪ್ರಜೆ; ರಾಷ್ಟ್ರಗೀತೆ ಮೂಲಕ ಚಾಲನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಕಾರ್ಯಕ್ರಮವನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದು, ಸನ್ಮಾನದ ವೇದಿಕೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಹೌದು. ಹುಬ್ಬಳ್ಳಿ-ಧಾರವಾಡ‌ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಲಿರುವ ಮುರ್ಮು ಅವರ ಜೊತೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಭೈರತಿ ಬಸವರಾಜ, ಶಂಕರಪಾಟೀಲ ಮುನೇನಕೊಪ್ಪ, ಹಾಲಪ್ಪ ಆಚಾರ, ಮಾಜಿ ಸಿಎಂ ಜಗದೀಶ ಶೆಟ್ಟರ, ಶಾಸಕ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ ಹಾಗೂ ಮೇಯರ್ ಈರೇಶ ಅಂಚಟಗೇರಿ ವೇದಿಕೆ ಏರಿದ್ದು, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ‌ ನೀಡಲಾಯಿತು.

ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉತ್ತರ ಕರ್ನಾಟಕದ ಆರಾಧ್ಯ ದೈವ ಸಿದ್ಧಾರೂಢರ 900 ಗ್ರಾಂ ತೂಕದ ಬೆಳ್ಳಿ ವಿಗ್ರಹವನ್ನು ಕಾಣಿಕೆಯಾಗಿ ನೀಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

26/09/2022 03:46 pm

Cinque Terre

40.48 K

Cinque Terre

0

ಸಂಬಂಧಿತ ಸುದ್ದಿ