ದಸರಾ ಹಬ್ಬದ ಅಂಗವಾಗಿ ರಜೆ ಇರುವ ಕಾರಣ ರಜೆಗೆ ಊರಿಗೆ ಹೋಗುವ ಪ್ರಯಾಣಿಕರಿಂದ ಖಾಸಗಿ ಬಸ್‌ನವರು ಹೆಚ್ಚಿನ ದರ ಪಡೆಯುತ್ತಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಖಾಸಗಿ ಬಸ್‌ಗಳನ್ನು ತಪಾಸಣೆ ನಡೆಸಿ ಅವರಿಗೆ ಬಿಸಿ ಮುಟ್ಟಿಸಿದ್ದಾರೆ.
ಹುಬ್ಬಳ್ಳಿಯಿಂದ ಬೆಂಗಳೂರು, ಬೆಂಗಳೂರಿನಿಂದ ಹುಬ್ಬಳ್ಳಿಗೆ, ಹುಬ್ಬಳ್ಳಿಯಿಂದ ಪುಣೆಗೆ ಸಂಚಾರ ಮಾಡುವ ಖಾಸಗಿ ಬಸ್ಸಿನಲ್ಲಿ ದಸರಾ ಹಬ್ಬದ ಅಂಗವಾಗಿ ರಜೆಗೆಂದು ಮನೆಗೆ ಬರುವ ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯಲಾಗುತ್ತಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಧಾರವಾಡದ ಟೋಲನಾಕಾ ಬಳಿ ಕೆಲ ಖಾಸಗಿ ಬಸ್‌ಗಳನ್ನು ತಪಾಸಣೆ ನಡೆಸಿದರು. ಅಲ್ಲದೇ ಹೆಚ್ಚುವರಿ ದರ ಪಡೆದ ಕೆಲ ಬಸ್‌ನ ಸಿಬ್ಬಂದಿಗೆ ದಂಡವನ್ನೂ ಸಹ ಹಾಕಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/09/2022 12:05 pm