ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯಲ್ಲಿ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಸಾರಿಗೆ ಬಸ್ ಗಾಯಾಳು ಪ್ರಯಾಣಿಕರನ್ನು ಶಾಸಕಿ ಕುಸುಮಾವತಿ ಶಿವಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿ ಧೈರ್ಯ ಹೇಳಿದ್ದಾರೆ.
ಹೌದು ! ಇಂದು ಬೆಳಿಗ್ಗೆ ಸಾರಿಗೆ ಬಸ್ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಈ ವಿಷಯ ತಿಳಿದ ಶಾಸಕಿ ಕುಸುಮಾವತಿ ದಿಡೀರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ. ಇನ್ನೂ ರಾಜ್ಯ ಕೃಷಿ ಉತ್ಪನ್ನ ಮತ್ತು ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡರ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಆರ್.ಪಾಟೀಲ, ಬಿಜೆಪಿ ಮುಖಂಡ ಬಸವರಾಜ ಕುಂದಗೋಳ ಸಹ ಭೇಟಿ ಗಾಯಾಳುಗಳ ಯೋಗ ಕ್ಷೇಮ ವಿಚಾರಣೆ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
10/10/2022 08:00 pm