ಧಾರವಾಡ: ನವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಧಾರವಾಡದ ಪ್ರಸಿದ್ಧ ದುರ್ಗಾದೇವಿ ದೇವಸ್ಥಾನ ಭಕ್ತರಿಂದ ತುಂಬಿ ತುಳುಕುತ್ತಿತ್ತು.
ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ಭಕ್ತರು ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇನ್ನು ಸೋಮವಾರ ಆಯುಧ ಪೂಜೆ ಹಿನ್ನೆಲೆಯಲ್ಲಿ ದುರ್ಗಾದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನವರಾತ್ರಿ ಅಂಗವಾಗಿ ದೇವಿಗೆ ಒಂಬತ್ತು ದಿನಗಳ ಕಾಲ ವಿವಿಧ ರೀತಿಯಲ್ಲಿ ಅಲಂಕಾರ ಮಾಡಲಾಗಿತ್ತು.
Kshetra Samachara
26/10/2020 04:30 pm