ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಮ್ಮನಗುಡ್ಡಕ್ಕೆ ಮಂಗಳವಾರ ಹಾಗೂ ಶುಕ್ರವಾರ ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ : ಶೀಗಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯಿಂದ ಮಾಡಲಾಗಿದ್ದ ಯಲ್ಲಮ್ಮನಗುಡ್ಡ ವಿಶೇಷ ಬಸ್ ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಪ್ರಯಾಣಿಕರ ಬೇಡಿಕೆಯ ಮೇರೆಗೆ ದೀಪಾವಳಿಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದಂದು ವಿಶೇಷ ಬಸ್ ಗಳ ವ್ಯವಸ್ಥೆ ಮುಂದುವರೆಸಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಶೀಗಿ ಹುಣ್ಣಿಮೆಯ ಪ್ರಯುಕ್ತ ಸೌದತ್ತಿ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಅಕ್ಟೋಬರ್ 17ರಂದು ಗುರುವಾರ, ದೇವಿಯ ವಾರದ ನಿಮಿತ್ಯ 18ರಂದು ಶುಕ್ರವಾರ ಹಾಗೂ 20ರಂದು ರವಿವಾರ ಹುಬ್ಬಳ್ಳಿ ಹೊಸೂರು ಬಸ್ ನಿಲ್ದಾಣ, ಗೋಕುಲ ರಸ್ತೆ ಬಸ್ ನಿಲ್ದಾಣ ಹಾಗೂ ನವಲಗುಂದ ಬಸ್ ನಿಲ್ದಾಣದಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿತ್ತು.

ಈ ವಿಶೇಷ ಬಸ್ ಗಳಿಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಅಕ್ಟೋಬರ್ 17 ಗುರುವಾರ ದಿಂದ 20 ರವಿವಾರದವರೆಗೆ ಒಟ್ಟು 112 ವಿಶೇಷ ಬಸ್ಸುಗಳನ್ನು ಬಿಡಲಾಯಿತು. ಹುಬ್ಬಳ್ಳಿ-ಧಾರವಾಡ, ನವಲಗುಂದ ಹಾಗೂ ಸುತ್ತಮುತ್ತಲಿನ ಊರುಗಳ ಅಂದಾಜು 13 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಪ್ರಯಾಣ ಮಾಡಿದ್ದಾರೆ. ಅವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರೇ ಇದ್ದರು.

ದೇವಿಯ ವಾರದ ನಿಮಿತ್ಯ ದೀಪಾವಳಿಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ವಿಶೇಷ ಬಸ್ ಗಳ ವ್ಯವಸ್ಥೆ ಮುಂದುವರೆಸುವಂತೆ ಕೋರಿ ಸಾರ್ವಜನಿಕ ಪ್ರಯಾಣಿಕರಿಂದ ಬೇಡಿಕೆ ಬಂದಿರುತ್ತದೆ. ಅದರಂತೆ ಅ.22, 25 ಹಾಗೂ 27 ರಂದು ಸಹ ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

20/10/2024 10:26 pm

Cinque Terre

13.63 K

Cinque Terre

0

ಸಂಬಂಧಿತ ಸುದ್ದಿ