ಅಣ್ಣಿಗೇರಿ : ಅಣ್ಣಿಗೇರಿ ತಾಲ್ಲೂಕಿನ ಶಲವಡಿ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಗ್ರಾಮಸ್ತರು ಸೇರಿದಂತೆ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳು ಪೂಜೆಯಲ್ಲಿ ಭಾಗಿಯಾಗಿ ಪುನೀತರಾದರು.
ಹೌದು ಸುಕ್ಷೇತ್ರ ಶಲವಡಿ ಗ್ರಾಮದ ಶ್ರೀ ಬಸವರಾಜ ಬಡಿಗೇರ ಅವರ 18ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಾಲಾಧಾರಣೆ ಪ್ರಯುಕ್ತ ಗ್ರಾಮದ ಅವರ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೂಜಾ ಸಮಾರಂಭದಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳು ಅಯ್ಯಪ್ಪನ ಭಜನೆ ಮಾಡುತ್ತಿರುವ ದೃಶ್ಯಗಳು ಕಂಡುಬಂದವು.
Kshetra Samachara
21/12/2021 07:58 pm