ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಬುಧವಾರ ಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಗ್ರಾಮದ ಪರ್ವತ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಕೂಡ ಜರುಗಿತು. ಬೆಳಿಗ್ಗೆಯಿಂದಲೇ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.
ಮಧ್ಯಾಹ್ನ ಮಲ್ಲಿಕಾರ್ಜುನ ದೇವರ ಮೂರ್ತಿ ಹೊತ್ತ ಪಲ್ಲಕ್ಕಿಯನ್ನು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಕರಡಿ ಮಜಲು ಹಾಗೂ ಭಜನಾ ಮೇಳದವರೂ ಪಾಲ್ಗೊಂಡಿದ್ದರು. ಸುಮಂಗಲೆಯರು ಆರತಿ ಹಿಡಿದು ಪಲ್ಲಕ್ಕಿ ಜೊತೆ ಸಾಗಿದರು.
ನಿನ್ನೆ ಶಿವರಾತ್ರಿ ಉಪವಾಸ ವೃತ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಜಾಗರಣೆ ಸಹ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ ದೇವಸ್ಥಾನದ ಆವರಣದಲ್ಲಿ ಮಹಾಪ್ರಸಾದ ಕೂಡ ನಡೆಯಿತು.
Kshetra Samachara
02/03/2022 11:53 am