ಹುಬ್ಬಳ್ಳಿ: ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬಕ್ಕೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಇದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸಾಂಪ್ರದಾಯಿಕ ಹೋಳಿ ಆಚರಣೆ ಮಾಡುವ ಮೂಲಕ ವಿದೇಶಿಗರು ಕೂಡ ಭಾರತೀಯ ಸಂಪ್ರದಾಯಕ್ಕೆ ವಿಶೇಷ ಗೌರವ ಸಲ್ಲಿಸಿದ್ದಾರೆ.
ಹೌದು..ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸ್ಟಾರ್ ಏರ್, ಇಂಡಿಗೋ ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಸಿಬ್ಬಂದಿ ಪರಸ್ಪರ ಬಣ್ಣ ಹಚ್ಚುವ ಮೂಲಕ ಆಚರಣೆ ಮಾಡಿದರು. ಇನ್ನೂ ವಿಶೇಷ ಅಂದರೆ ವಿದೇಶಿ ಪ್ರಯಾಣಿಕರು ಕೂಡ ಬಣ್ಣ ಹಚ್ಚುವ ಮೂಲಕ ಸಿಬ್ಬಂದಿ ಜೊತೆಗೆ ಹೋಳಿ ಹಬ್ಬದ ಆಚರಣೆ ಮಾಡಿದ್ದಾರೆ.
ಈ ಸಂಭ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದು, ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಪ್ರಮೋದ್ ಠಾಕ್ರೆ ಸಿಬ್ಬಂದಿಗೆ ಹಾಗೂ ಪ್ರಯಾಣಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
19/03/2022 09:31 pm