ಹುಬ್ಬಳ್ಳಿ: ನಗರದ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಕಳೆಗಟ್ಟಿದ್ದು ಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ. ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ ಕಟ್ಟಲಾದ ದೇವಸ್ಥಾನವಾಗಿದ್ದು, ಚತುರ್ಮುಖ ಶಿವಲಿಂಗ ಇಲ್ಲಿನ ವಿಶೇಷವಾಗಿದೆ. ಯುಗಾದಿ ಹಬ್ಬದ ದಿನ ಬೆಳಗ್ಗೆ 6-45 ರಿಂದ 7 ಗಂಟೆಯವರೆಗೆ ಈ ಚತುರ್ಮುಖ ಲಿಂಗದ ಮೇಲೆ ಸೂರ್ಯರಶ್ಮಿ ಬೀಳುವುದು ವಿಶೇಷವಾಗಿದೆ.
Kshetra Samachara
02/04/2022 07:34 pm