ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ; ಸೌಹಾರ್ದತೆಗೆ ಸಾಕ್ಷಿಯಾದ ಅಡ್ಡಪಲ್ಲಕ್ಕಿ: ಜಾತಿ ಮತ ಬೇಧ ಮರೆತು ಶ್ರೀಗಳ ದರ್ಶನ ಪಡೆದ ಮುಸ್ಲಿಂ ಮುಖಂಡರು...!

ಹುಬ್ಬಳ್ಳಿ; ಕೇಸರಿ ಶಾಲು, ಹಿಜಾಬ್ ವಿವಾದದಿಂದ ಜನರ ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ್ದ ಕೆಲವೊಂದು ಘಟನೆಗಳನ್ನು ಮೆಟ್ಟಿನಿಂತು ಹುಬ್ಬಳ್ಳಿಯು ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದೆ.

ಹಳೆ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಹಿಂದೂ ಮುಸ್ಲಿಂ ಎಂಬ ಬೇಧವನ್ನು ಮರೆತು ಉತ್ಸವದಲ್ಲಿ ಪಾಲ್ಗೊಂಡಿರುವುದು ನಿಜಕ್ಕೂ ಸೌಹಾರ್ದತೆಗೆ ಸಾಕ್ಷಿಯಾಗಿದೆ. ಇಸ್ಲಾಂ ಧರ್ಮದ ಪವಿತ್ರ ರಂಜಾನ್ ತಿಂಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆಯುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಬೆಳ್ಳಂಬೆಳಿಗ್ಗೆ ಹಿಂದೂ-ಮುಸ್ಲಿಂ ಸಮುದಾಯದ ಜನರು ತಮ್ಮ ತಮ್ಮ ಮನೆಯ ಆವರಣದಲ್ಲಿ ಸಾರಣೆ ಮಾಡಿ ರಂಗೋಲಿ ಹಾಕಿದ್ದರು. ಅಲ್ಲದೇ ಅಡ್ಡಪಲ್ಲಕ್ಕಿ ಮನೆಯ ಮುಂದೆ ಬರುತ್ತಿದ್ದಂತೆಯೇ ಮುಸ್ಲಿಂ ಸಮುದಾಯದ ಮುಖಂಡರೊಬ್ಬರು ಶ್ರೀಗಳ ದರ್ಶನ ಪಡೆದು ಶ್ರೀಗಳಿಗೆ ಗೌರವ ಅರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀಗಳು ಪ್ರಸಾದ ನೀಡುವ ಮೂಲಕ ಜಾತಿ-ಮತ ಬೇಧವನ್ನು ಮರೆತು ಎಲ್ಲರೂ ಒಂದಾಗಿ ಬಾಳುವಂತೆ ಕರೆ ನೀಡಿದರು.

Edited By :
Kshetra Samachara

Kshetra Samachara

04/04/2022 04:04 pm

Cinque Terre

28.16 K

Cinque Terre

2

ಸಂಬಂಧಿತ ಸುದ್ದಿ