ನವಲಗುಂದ : ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದ ಶ್ರೀ ದಾನಮ್ಮದೇವಿ ದೇವಸ್ಥಾನ ಹಾಗೂ ಮೂರ್ತಿಯ ಪ್ರತಿಷ್ಠಾಪನಾ ಹಾಗೂ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಉದ್ಘಾಟನೆಯ ನಿಮಿತ್ತ ಗ್ರಾಮದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿತ್ತು.
ಇನ್ನು ಶ್ರೀಮದ್ ರಂಭಾಪುರೀ ವೀರಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜ ದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಬಾಳೆಹೊನ್ನೂರ ಇವರ ದಿವ್ಯ ಹಸ್ತದಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಊರಿನಲ್ಲಿ ಸಂಭ್ರಮ ಮನೆ ಮಾಡಿತ್ತು. ಮಹಿಳೆಯರು ಕುಂಭ ಹೊತ್ತು ಸಂಭ್ರಮ ಪಟ್ಟರೆ, ಗ್ರಾಮಸ್ಥರು ವಾದ್ಯಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.
Kshetra Samachara
13/04/2022 11:45 am