ಧಾರವಾಡ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿರುವ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರು ಅದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ರಂಜಾನ್ ಹಬ್ಬದ ಮುನ್ನವೇ ಹಿಂದೂ, ಮುಸ್ಲಿಂ ಬಾಂಧವರಿಗೆ ಭರ್ಜರಿ ಇಫ್ತಾರ್ ಕೂಟ ಹಮ್ಮಿಕೊಂಡಿದ್ದರು.
ಧಾರವಾಡ ಈದ್ಗಾ ಮೈದಾನದಲ್ಲಿ ದೊಡ್ಡ ಪ್ರಮಾಣದಲ್ಲೇ ನಡೆದ ಇಫ್ತಾರ್ ಕೂಟದಲ್ಲಿ ಸಾವಿರಾರು ಜನ ಪಾಲ್ಗೊಂಡು ಆ ಕೂಟವನ್ನು ಯಶಸ್ವಿಗೊಳಿಸಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಕಡೆಗಳಲ್ಲಿ ಇಸ್ಮಾಯಿಲ್ ತಮಟಗಾರ ಅಭಿಮಾನಿಗಳು ಇಫ್ತಾರ್ ಕೂಟ ಆಯೋಜಿಸಿ ಭಾವೈಕ್ಯತೆ ಮೆರೆದಿದ್ದಾರೆ.
ಇಂದು ಸ್ವತಃ ಇಸ್ಮಾಯಿಲ್ ಅವರೇ ಇಫ್ತಾರ್ ಕೂಟ ಹಮ್ಮಿಕೊಂಡು ಗಮನಸೆಳೆದಲ್ಲದೇ ಕುಸ್ತಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ರಫೀಕ್ ಅವರಿಗೆ ಅಂಜುಮನ್ ಸಂಸ್ಥೆ ವತಿಯಿಂದ 25 ಸಾವಿರ ಧನ ಸಹಾಯ ಮಾಡಿದರು. ಈ ಇಫ್ತಾರ್ ಕೂಟದಲ್ಲಿ ಹಿಂದೂ, ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
Kshetra Samachara
24/04/2022 02:15 pm