ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಮ್ಮಿನಬಾವಿಯಲ್ಲಿ ಸಂಭ್ರಮದ ಇಫ್ತಾರ ಕೂಟ

ಧಾರವಾಡ: ರಂಜಾನ್ ಹಬ್ಬದ ಪ್ರಯುಕ್ತ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರಿಂದ ಸೌಹಾರ್ದದ ಇಫ್ತಾರ್ ಕೂಟವನ್ನು ಹಮ್ಮಿಕೊಳ್ಳಲಾಗಿತ್ತು.

ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ರೋಜಾ (ಉಪವಾಸ) ಮಾಡುವುದರಿಂದ ಸಹಜವಾಗಿಯೇ ಅಲ್ಲಲ್ಲಿ ಇಫ್ತಾರ್ ಕೂಟ ಹಮ್ಮಿಕೊಳ್ಳುವ ಪದ್ಧತಿ ಬೆಳೆದು ಬಂದಿದೆ. ಶುಕ್ರವಾರವೂ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಹಾಗೂ ಇಸ್ಮಾಯಿಲ್ ತಮಟಗಾರ ಅಭಿಮಾನಿ ಬಳಗದ ವತಿಯಿಂದ ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿತ್ತು.

ಸ್ವತಃ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರೇ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು.

Edited By :
Kshetra Samachara

Kshetra Samachara

30/04/2022 09:54 am

Cinque Terre

27.38 K

Cinque Terre

1

ಸಂಬಂಧಿತ ಸುದ್ದಿ