ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಉಪ್ಪಿನ ಬೆಟಗೇರಿ ಪುರ ಪ್ರವೇಶ ಮಾಡಿದ ಗ್ರಾಮದೇವಿಯರು

ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ 21 ವರ್ಷಗಳ ನಂತರ ಗ್ರಾಮ ದೇವಿಯರಾದ ದ್ಯಾಮವ್ವ ಹಾಗೂ ದುರ್ಗಾದೇವಿ ಜಾತ್ರಾ ಮಹೋತ್ಸವ ನಡೆಯುತ್ತಿದೆ.

ಬುಧವಾರ ಪುರ ಪ್ರವೇಶ ಮಾಡಿದ ದೇವಿಯರ ಮೂರ್ತಿಗಳನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡರು. ಗ್ರಾಮದ ಹಳೇ ಬಸ್ ನಿಲ್ದಾಣದಿಂದ ಆರಂಭವಾದ ಮೂರ್ತಿ ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತ ಸಹಸ್ರಾರು ಸುಮಂಗಲೆಯರು ಮೆರವಣಿಗೆಯಲ್ಲಿ ಗಮನಸೆಳೆದರು.

ಇನ್ನು ಜಗ್ಗಲಿಗೆ ಮೇಳ, ಕೋಲಾಟದ ತಂಡಗಳು ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ದುರ್ಗಾದೇವಿ ಹಾಗೂ ದ್ಯಾಮವ್ವನ ಮೂರ್ತಿಯನ್ನು ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡುತ್ತ ಗ್ರಾಮದ ಹೈಸ್ಕೂಲ್ ಮೈದಾನಕ್ಕೆ ತಂದಿಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಜನಸ್ತೋಮ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Edited By : Shivu K
Kshetra Samachara

Kshetra Samachara

05/05/2022 02:32 pm

Cinque Terre

14.06 K

Cinque Terre

0

ಸಂಬಂಧಿತ ಸುದ್ದಿ