ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ

ಅಣ್ಣಿಗೇರಿ: ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಈಶ್ವರ ದೇವಸ್ಥಾನದಲ್ಲಿ ಬ್ರಾಹ್ಮಿ ಮಹೋತ್ಸವದಲ್ಲಿ ದೇವರುಗಳ ಮೂರ್ತಿ ಪ್ರತಿಷ್ಠಾಪನೆ ಮತ್ತು ಜಂಗಮ ವಟುಗಳ ಅಯ್ಯಾಚಾರ, ಶಿವಭಕ್ತರಿಗೆ ಶಿವದೀಕ್ಷೆ ಹಾಗೂ ಸರ್ವಧರ್ಮಗಳ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಈಶ್ವರ ದೇವಸ್ಥಾನದಲ್ಲಿ ನೆರವೇರಿದವು.

ಸರ್ವಧರ್ಮಗಳ ವಿವಾಹ ಕಾರ್ಯಕ್ರಮಕ್ಕೆ ಅಣ್ಣಿಗೇರಿ ದಾಸೋಹ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ನೂತನ ಜೋಡಿಗಳಿಗೆ ಆಶೀರ್ವಾದ ಮಾಡಿದರು.

ಇನ್ನೂ ಬೇರೆ ಬೇರೆ ಗ್ರಾಮಗಳಿಂದ ಬಂದ ಎಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಗ್ರಾಮದ ಎಲ್ಲಾ ಗುರು ಹಿರಿಯರು, ಯುವಕರು ಜಾತಿ ಭೇದ ಮರೆತು ಯಾವುದೇ ಕುಂದು ಕೊರತೆಗಳು ಆಗದಂತೆ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿರುವುದು ವಿಶೇಷವಾಗಿತ್ತು.

ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By :
Kshetra Samachara

Kshetra Samachara

15/05/2022 05:34 pm

Cinque Terre

37.82 K

Cinque Terre

0

ಸಂಬಂಧಿತ ಸುದ್ದಿ