ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಅದ್ದೂರಿಯಾಗಿ ನೆರವೇರಿದ ಶ್ರೀ ಎಚ್ಚರ ಸ್ವಾಮಿ ಜಾತ್ರಾ ಮಹೋತ್ಸವ

ನವಲಗುಂದ: ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಶ್ರೀ ಎಚ್ಚರ ಸ್ವಾಮಿ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನೆರವೇರಿತು. ಜಾತ್ರಾ ಮಹೋತ್ಸವದಲ್ಲಿ ನೂರಾರು ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಜನರು ಭಾಗಿಯಾಗಿ ಸಂಭ್ರಮ ಪಟ್ಟರು.

ಜಾತ್ರಾ ಸಡಗರದಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು. ಅಷ್ಟೇ ಅಲ್ಲದೆ ಗ್ರಾಮಸ್ಥರು ಎತ್ತುಗಳಿಗೆ ಹಾಗೂ ಚಕ್ಕಡಿಗಳಿಗೆ ಶೃಂಗರಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಇದರೊಂದಿಗೆ ಆಯಟ್ಟಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಸಡಗರ ಸಂಭ್ರಮ ಮುಗಿಲು ಮುಟ್ಟಿತ್ತು.

Edited By : PublicNext Desk
Kshetra Samachara

Kshetra Samachara

24/06/2022 10:02 am

Cinque Terre

3.73 K

Cinque Terre

0

ಸಂಬಂಧಿತ ಸುದ್ದಿ