ಅಣ್ಣಿಗೇರಿ: ಮೊಹರಂ ಎಂದರೆ ಮಹಮದಿಯರ ಮೊದಲ ತಿಂಗಳು.ಇಲ್ಲಿಂದ ಇಸ್ಲಾಂ ವರ್ಷ ಆರಂಭವಾಗುತ್ತದೆ. ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಈ ಮೊಹರಂ ಹಬ್ಬದಲ್ಲಿ ಯಾವ ತಾರತಮ್ಯ ಇಲ್ಲದಂತೆ ಹಿಂದೂಗಳು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಬಾಂಧವರು ಕೂಡಿಕೊಂಡು ಆಚರಣೆ ಮಾಡುವುದು ವಿಶೇಷವಾಗಿರುತ್ತದೆ.
ಹತ್ತು ದಿನಗಳ ಕಾಲದವರೆಗೆ ನಡೆಯುವ ಈ ಹಬ್ಬದ ಆಚರಣೆಯು ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬದಲ್ಲಿ ಭಾಗವಹಿಸುತ್ತಾರೆ. ಈ ಹಬ್ಬದಲ್ಲಿ ಬರುವ ಹೆಜ್ಜೆ ಕುಣಿತ,ಮರಗಾಲು ಕುಣಿತ ಹೀಗೆ ಹಲವಾರು ತರದ ಕುಣಿತಗಳನ್ನು ಯಾವುದೇ ಜಾತಿ ಭೇದವಿಲ್ಲದೆ ಕುಣಿಯುತ್ತಾರೆ. ಗ್ರಾಮೀಣ ಭಾಗದಲ್ಲಿ ಈ ಕುಣಿತಕ್ಕೆ ಅಲಾಯಿ ಹೆಜ್ಜೆ ಕುಣಿತ ಎಂದು ಕರೆಯುತ್ತಾರೆ.
ಇನ್ನೂ ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಹಬ್ಬವನ್ನು ಸರ್ಕಾರದ ನಿಯಮಗಳಂತೆ ಪಾಲಿಸಲಾಗಿತ್ತು.ಆದರೆ ಈ ವರ್ಷ ಹಬ್ಬವನ್ನು ಜಿಲ್ಲೆ ಸೇರಿದಂತೆ ತಾಲೂಕಿನ ಭದ್ರಾಪುರ ಗ್ರಾಮ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಆಚರಣೆ ಮಾಡುತ್ತಿದ್ದಾರೆ.
Kshetra Samachara
09/08/2022 01:25 pm