ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಆಡಳಿತ, ಹುಬ್ಬಳ್ಳಿ ತಾಲೂಕು ಕೊರಮ ಸಮಾಜ ಹಾಗೂ ಧಾರವಾಡ ಜಿಲ್ಲಾ ಕೊರಮ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ, ಅಗಸ್ಟ್12 ರಂದು ಬೆಳಿಗ್ಗೆ 11.30ಕ್ಕೆ ತಹಶಿಲ್ದಾರರ ಕಚೇರಿಯ ಸಭಾಭವನದಲ್ಲಿ ಶಿವಶರಣ ನೂಲಿಯ ಚಂದಯ್ಯನವರ ಜಯಂತ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ ಎಂದು ಮುಖಂಡ ಶಶಿಕಾಂತ ಬಿಜವಾಡ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಬಳಿಕ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, 12ನೇ ಶತಮಾನದ ಕಾಯಕಯೋಗಿ ಶಿವಶರಣ ನೂಲಿಯ ಚಂದಯ್ಯನವರ ಜಯಂತ್ಯೋತ್ಸವವನ್ನು ಎಲ್ಲ ಸರ್ಕಾರಿ ಇಲಾಖೆಯಲ್ಲಿ ಆಚರಿಸಲು ಸರ್ಕಾರ ಆದೇಶ ನೀಡಿದೆ. ಇದನ್ನು ಅಖಂಡ ಕೊರಮ ಸಮಾಜ ಸ್ವಾಗತಿಸುತ್ತೆ ಅಲ್ಲದೇ ಸಿಎಂಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಈ ವರ್ಷ ಶ್ರೀ ನೂಲಿ ಚಂದಯ್ಯನವರ 915 ಜಯಂತ್ಸೋತ್ಸವವನ್ನು ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತಿದೆ.
ಹುಬ್ಬಳ್ಳಿಯಲ್ಲಿ ತಹಶಿಲ್ದಾರರ ಕಚೇರಿ ನಡೆಯಲಿರುವ ಕಾರ್ಯಕ್ರಮದಲ್ಲಿ ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಲಿದ್ದು, ಅಂದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ರಂಗದಲ್ಲಿ ಸಾಧನೆಗೈದ ಸಾಧನಕರಿಗೆ ಸನ್ಮಾನ ಮಾಡಲಾಗುವುದು ಎಂದರು.
ಇದಕ್ಕೂ ಪೂರ್ವದಲ್ಲಿ ಶಿವಶರಣ ನೂಲಿಯ ಚಂದಯ್ಯನವರ ಭಾವಚಿತ್ರದ ಮೆರವಣಿಗೆಯನ್ನು ಗಂಗಾಧರ ನಗರದಿಂದ ಪ್ರಾರಂಭಗೊಂಡು ಕೆಇಬಿ, ರೈಲ್ಚೆ ನಿಲ್ದಾಣ ರಸ್ತೆ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ತಹಶಿಲ್ದಾರ ಕಚೇರಿ ತಲುಪಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಮೆರವಣಿಗೆಯಲ್ಲಿ ಕರಡಿ ಮಜಲು, ಜಗ್ಗ ಹಲಗಿ, ಡೊಳ್ಳು ಸೇರಿದಂತೆ ವಿವಿಧ ವಾದ್ಯ ತಂಡಗಳು ಭಾಗವಹಿಸಲಿವೆ ಎಂದರು.
Kshetra Samachara
10/08/2022 02:41 pm