ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯುಧ ಪೂಜೆ ಸಂಭ್ರಮ ಗರಿಗೇದರಿದ್ದು, ನಗರದ ವಿವಿಧೆಡೆ ಸಂಭ್ರಮದಿಂದ ನಡೆಯುತ್ತಿದೆ. ಜನರು ವಾಹನ, ಆಯುಧಗಳಿಗೆ ಪೂಜೆ ನೆರವೇರಿಸುತ್ತಿದ್ದಾರೆ.
ವಿಜಯದಶಮಿ ಎಲ್ಲ ಕಾರ್ಯಗಳಲ್ಲೂ ವಿಜಯ ತಂದುಕೊಡಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ. ರೈತರಿಂದ ಹೊಲಗಳಲ್ಲಿ ಪೂಜೆ ನೆರವೇರಿಸಲಾಗುತ್ತಿದೆ. ಅಲ್ಲದೇ ಹುಬ್ಬಳ್ಳಿಯ ಮಿನಿವಿಧಾನಸೌಧದ ಎದುರಿನಲ್ಲಿ ತಾಲೂಕು ಆಡಳಿತದ ವಾಹನಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಈಗಾಗಲೇ ತಾಲೂಕಾಡಳಿತ ಹಾಗೂ ಜಿಲ್ಲಾಡಳಿತದ ವಾಹನಗಳಿಗೆ ಪೂಜೆ ಸಲ್ಲಿಸುವ ಆಯುಧ ಪೂಜೆ ಆಚರಿಸಲಾಗುತ್ತಿದೆ. ಒಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ.
Kshetra Samachara
04/10/2022 03:28 pm