ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರಪತಿಗಳ ಆಗಮನ : ರೋಬೋಟ್‌ಗಳಿಂದ ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿ ಭಾಷಾನುವಾದ

ಧಾರವಾಡ: ದೇಶದ ಪ್ರತಿಷ್ಠಿತ ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಯಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಗೆ ರಾಷ್ಟ್ರಪತಿಗಳು ಆಗಮಿಸುವ ಸಂಭ್ರಮ ಒಂದೆಡೆಯಾದರೆ ಇದೇ ಸಂಸ್ಥೆಯಿಂದ ರಾಷ್ಟ್ರಪತಿಗಳ ಮೂಲ ರಾಜ್ಯವಾದ ಓರಿಸ್ಸಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿ ಅನುವಾದ ಮಾಡುವ ರೋಬೋಟ್ ಯಂತ್ರವನ್ನು ಸಿದ್ಧಪಡಿಸುತ್ತಿರುವುದು ನಾಡಿನ ಹೆಮ್ಮೆಯ ಸಂಗತಿಯಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಶುಭ ಸಂದರ್ಭದಲ್ಲಿಯೇ ಈ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಹುಮುನೊಯ್ಡ ರೋಬೋಟ್ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.

ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಬುಡಕಟ್ಟು ಭಾಷೆಗಳಿಂದ ಇತರ ಭಾಷೆಗಳಿಗೆ ಧ್ವನಿ ಭಾಷಾನುವಾದದ ಉಪಕರಣವನ್ನು ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆಯೆಂದು ಈ ಸಂಸ್ಥೆಯ ಇಸಿಇ ವಿಭಾಗದ ಪ್ರಾಧ್ಯಾಪಕರು ಹಾಗೂ ಈ ಯೋಜನೆಯ ಪ್ರಧಾನ ಪರೀಕ್ಷಕ ಡಾ.ಕೆ.ಟಿ.ದೀಪಕ ತಿಳಿಸಿದ್ದಾರೆ. ಪ್ರಸ್ತುತ ಈ ರೋಬೋಟ್ ತಂತ್ರಜ್ಞಾನದಲ್ಲಿ ಬುಡಕಟ್ಟು ಜನರಿಗೆ ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಿರುವ ಮಾಹಿತಿಯ ಬುಡಕಟ್ಟಿನ ಭಾಷೆಯಲ್ಲಿ ದೊರೆಯಲಿದೆ. ಈ ಯೋಜನೆಯಲ್ಲಿ ಓರಿಸ್ಸಾದ ಕುಯಿ ಮತ್ತು ಮುಂಡಾರಿ ಭಾಷೆಗಳನ್ನು ಹಾಗೂ ಕರ್ನಾಟಕದ ಲಂಬಾಣಿ ಹಾಗೂ ಸೋಲಿಗ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಇದರಿಂದಾಗಿ ಇಂಗ್ಲೀಷ್ ಭಾಷೆಯಿಂದ ಹೇಳಲ್ಪಟ್ಟ ಬುಡಕಟ್ಟಿನ ಭಾಷೆಗೂ ಹಾಗೂ ಬುಡಕಟ್ಟು ಭಾಷೆಯಿಂದ ಇಂಗ್ಲೀಷ್ ಭಾಷೆಗೂ ಸ್ಪಷ್ಟವಾಗಿ ಅನುವಾದ ಮಾಡಬಹುದಾದಂತಹ ತಂತ್ರಲಿಪಿಯನ್ನು ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ ಲಂಬಾಣಿ, ಸೋಲಿಗ ಮತ್ತು ಕುಯಿಗೆ ಪಠ್ಯದಿಂದ ಪಠ್ಯಕ್ಕೆ ಮಾತಿನ ಸಂಶ್ಲೇಷಣೆಯ ಮಾದರಿಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಡಾ.ದೀಪಕ್ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

23/09/2022 10:37 pm

Cinque Terre

7.8 K

Cinque Terre

0