ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 'ವಿದ್ಯಾರ್ಥಿಗಳು ಸಾಧನೆಯ ಕಡೆಗೆ ನಿರಂತರ ಪ್ರಯತ್ನ ನಡೆಸಬೇಕು'

ಹುಬ್ಬಳ್ಳಿ: ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್ ಪಾಟೀಲ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ಪಿಯು ವಾಣಿಜ್ಯ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು. ಮುಖ್ಯ ಅಥಿತಿಗಳಾಗಿ ಧಾರವಾಡದ ಜೆ ಎಸ್ ಎಸ್ ಮಹಾವಿದ್ಯಾಲಯದ ಉಪನ್ಯಾಸಕರು ಡಾ. ಆರ್ ಎಂ ಪತ್ತಾರ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ವಾಣಿಜ್ಯ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರ ಜೀವನವನ್ನು ಮಾದರಿಯಾಗಿಸಿಕೊಂಡು ತಮ್ಮ ಇಚ್ಛೆಯಂತೆ ಸಾಧನೆಯ ಕಡೆಗೆ ನಿರಂತರ ಪ್ರಯತ್ನಶೀಲರಾಗಬೇಕು. ಸಾಧನೆ ಒಂದು ತಪಸ್ಸು ಅದಕ್ಕೆ ಏಕಾಗ್ರತೆ ಮತ್ತು ಕಠಿಣ ಪರಿಶ್ರಮ ಬೇಕು ಎಂದರು.

ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವ ಕಾರ್ಯದರ್ಶಿಗಳಾದ ಆರ್ ಕೆ ಪಾಟೀಲರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಂದೆ ತಾಯಿ ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಅಧ್ಯಯನಶೀಲರಾಗಿ ಪಠ್ಯದಷ್ಟೇ ಕ್ರೀಡಾ ಚಟುವಟಿಕೆಗಳು ಮುಖ್ಯ ನಮ್ಮ ಸರ್ವೋತ್ತಮ ಬೆಳವಣಿಗೆಗೆ ಅವು ಅವಶ್ಯ ಎಂದರು.

ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಉಪಾಧ್ಯಕ್ಷ ವಿ.ಕೆ ರಡ್ಡೆರ್, ಎಚ್ ಎಚ್ ಕಿರೆಸೂರ, ಸಹ ಸಂಯೋಜಕರಾದ ಡಾ. ಶಿವರಾಂ ಪಾಟೀಲ ವನಿತಾ ಮಹೇಂದ್ರಕರ್ ಉಪಸ್ಥಿತರಿದ್ದರು. ಪ್ರಾಚಾರ್ಯರು ಎಸ್ ಬಿ ಸನಗೌಡರ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಕುಮಾರಿ ಚಂದನಾ ಕೋಟಿ ಹಾಗೂ ಇತರ ಹತ್ತು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ನಂತರ ಮನರಂಜನಾ ಕಾರ್ಯಕ್ರಮ ನಡೆದವು ವಿದ್ಯಾರ್ಥಿಗಳು ಭೋದಕ ಭೋದಕೇತರರು ಉಪಸ್ಥಿತರಿದ್ದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

13/07/2022 09:59 pm

Cinque Terre

124.62 K

Cinque Terre

0

ಸಂಬಂಧಿತ ಸುದ್ದಿ