ಧಾರವಾಡ: ಫೆ.22 ಹಾಗೂ 23 ರಿಂದ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ಧನಗೌಡರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರಿಗಾಗಿ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಕೂಟಗಳು ನಡೆಯಲಿದ್ದು, ಫೆ.22 ರಂದು ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಕ್ರಿಕೆಟ್, ಬಾಸ್ಕೆಟ್ ಬಾಲ್ ಸೇರಿದಂತೆ ಇತರೆ ಕ್ರೀಡಾಕೂಟಗಳು ನಡೆಯಲಿವೆ ಎಂದರು.
ಫೆ.23 ರಂದು ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಲಿದ್ದಾರೆ ಎಂದರು.
Kshetra Samachara
16/02/2021 04:25 pm