ಧಾರವಾಡ: ನಮ್ಮ ಬದುಕಿನ ಸ್ಪರ್ಧಾತ್ಮಕ ಚಟುವಟಿಕೆಗಳ ಪ್ರಮುಖ ಭಾಗವಾಗಿರುವ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ವಿಕಾಸದ ಮೂಲವಾಗಿವೆ ಎಂದು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಹೇಳಿದರು.
ಅವರು ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಓಂ ಸಾಯಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಹೊನಲು ಬೆಳಕಿನ ರಾಜ್ಯಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವೇದಿಕೆಯಲ್ಲಿದ್ದ ಅಮ್ಮಿನಬಾವಿ ಅಯ್ಯಪ್ಪಸ್ವಾಮಿ ಆಶ್ರಮದ ಶ್ರೀನಾರಾಯಣ ಗುರುಸ್ವಾಮೀಜಿ ಪಂದ್ಯಾವಳಿಗೆ ಶುಭ ಹಾರೈಸಿದರು.
ಶಾಸಕ ಅಮೃತ ದೇಸಾಯಿ ಮಾತನಾಡಿ, ಕ್ರೀಡಾಪಟುಗಳ ಸಾಧನೆಯು ದೇಶದ ಹಿರಿಮೆಯನ್ನು ಹೆಚ್ಚಿಸುತ್ತದೆ. ಗ್ರಾಮೀಣ ಭಾಗದ ಯುಕರು ಕ್ರೀಡಾ ಚಟುವಟಿಕೆಗಳತ್ತ ಆಕರ್ಷಿತರಾಗಲು ಹಳ್ಳಿಗಾಡಿನ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಪ್ರಸ್ತುತ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಮ್ಮಿನಬಾವಿಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಓಂ ಸಾಯಿ ಸ್ಪೋರ್ಟ್ಸ್ ಕ್ಲಬ್ ಬಹಳ ವ್ಯವಸ್ಥಿತವಾಗಿ ಸಂಘಟಿಸಿರುವುದು ಸಂತಸ ತಂದಿದೆ ಎಂದರು.
ಗ್ರಾಪಂ ಅಧ್ಯಕ್ಷ ಜಗನ್ನಾಥ ಕುಸುಗಲ್ಲ, ಉಪಾಧ್ಯಕ್ಷೆ ನೀಲವ್ವ ತಿದಿ, ಶಾಂತೇಶ್ವರ ಪ್ರೌಢ ಶಾಲೆ ಕಾರ್ಯಾಧ್ಯಕ್ಷ ಎಂ.ವಿ. ಹೊಸೂರ, ಬಿಜೆಪಿ ಯುವ ಮುಖಂಡ ಮೋಹನ ಅಷ್ಟಗಿ, ತಾ.ಪಂ. ಮಾಜಿ ಸದಸ್ಯ ಸುರೇಂದ್ರ ದೇಸಾಯಿ, ಸುನೀಲ ಗುಡಿ, ಗ್ರಾ.ಪಂ. ಸದಸ್ಯ ವಿಠ್ಠಲ ಭೋವಿ ಇತರರು ಇದ್ದರು.
Kshetra Samachara
19/10/2021 06:28 pm