ಹುಬ್ಬಳ್ಳಿ:ಯೋಗ ಮಾಡಿದರೇ ರೋಗ ದೂರ ಎಂಬುವಂತ ಮಾತು ಅಕ್ಷರಶಃ ಸತ್ಯ. ಇಂತಹ ಯೋಗ ಸ್ಪರ್ಧೆಯ ಮೂಲಕ ಧಾರವಾಡ ಜಿಲ್ಲೆಯ ಯೋಗ ಪಟುಗಳು ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಾಧನೆ ಮಾಡುವ ಮೂಲಕ ಧಾರವಾಡ ಜಿಲ್ಲೆಯ ಹಾಗೂ ಕರ್ನಾಟಕದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಹೌದು.. ನ್ಯಾಷನಲ್ ಯೋಗಾಸನ ಸ್ಪೋರ್ಟ್ಸ್ ಫೆಡರೇಶನ್ ಮತ್ತು ಡಿಪಾರ್ಟ್ಮೆಂಟ್ ಆಫ್ ಸ್ಪೋರ್ಟ್ಸ್ ಆ್ಯಂಡ್ ಯೂತ್ ಸರ್ವಿಸ್ ಒಡಿಶಾ ಸರ್ಕಾರ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಧಾರವಾಡ ಜಿಲ್ಲೆಯ ಶಿರಗುಪ್ಪಿ ಗ್ರಾಮದ ಮೂರು ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ಸಾಧನೆ ಗೈದು ರಾಜ್ಯಕ್ಕೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಒಡಿಸ್ಸಾದ ಭುವನೇಶ್ವರದಲ್ಲಿ ನ.11 ರಿಂದ 13 ರವರೆಗೆ ರಾಷ್ಟ್ರೀಯ ಯೋಗಸನ ಕ್ರೀಡಾ ಸಂಸ್ಥೆ ಆಯೋಜಿಸಿದ ಎರಡನೇ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದೇಶದ ವಿವಿಧ ಜಿಲ್ಲೆಗಳಿಂದ ಆನ್ಲೈನ್ ಮೂಲಕ 30 ಸಾವಿರ ಯೋಗಾಪಟುಗಳು ಭಾಗವಹಿಸಿದ್ದರು. ಅದರಲ್ಲಿ 600 ವಿದ್ಯಾರ್ಥಿಗಳು ಫೈನಲ್ ಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ 24 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ 5 ಸ್ಪರ್ಧಾ ವಿಭಾಗಗಳಲ್ಲಿ ವಿಜಯಶಾಲಿಗಳಾಗಿದ್ದಾರೆ.
ಇನ್ನೂ ಶಿರಗುಪ್ಪಿಯ ಯೋಗ ಪಟುಗಳಾದ ವರುಣ ಕುರಹಟ್ಟಿ, ಶಿವಾನಂದ ಕುಂದಗೋಳ, ಪ್ರೀಯಾ ಹಿರೇಮಠ ಸಾಧನೆ ಮಾಡುವ ಮೂಲಕ ಧಾರವಾಡ ಜಿಲ್ಲೆಯ ಹಾಗೂ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ ಇನ್ನಷ್ಟು ಸಾಧನೆಗೆ ರಾಜ್ಯ ಸರ್ಕಾರ ಸಹಾಯಹಸ್ತವನ್ನು ನೀಡಬೇಕಿದೆ.
ಒಟ್ಟಿನಲ್ಲಿ ಯೋಗದ ಮೂಲಕ ದೇಶದ ದೃಷ್ಟಿಯನ್ನು ತಮ್ಮತ್ತ ಸೆಳೆಯುವಂತೆ ಮಾಡಿದ ಯೋಗಪಟುಗಳ ಸಾಧನೆ ನಿಜಕ್ಕೂ ಶ್ಲಾಘನೀಯವಾಗಿದ್ದು, ಸರ್ಕಾರ ಇನ್ನಷ್ಟು ಪ್ರೋತ್ಸಾಹ ನೀಡುವ ಮೂಲಕ ಮತ್ತಷ್ಟು ಸಾಧನೆ ಮಾಡಲು ಅವಕಾಶ ಕಲ್ಪಿಸಬೇಕಿದೆ.
Kshetra Samachara
18/11/2021 04:12 pm